26/01/2026
ಇಂದು #ಗಣರಾಜ್ಯೋತ್ಸವದ ಪ್ರಯುಕ್ತ, #ಉಚ್ಚನ್ಯಾಯಾಲಯದ ಮುಂಭಾಗದಲ್ಲಿ ಬೆಂಗಳೂರು ವಕೀಲರ ಸಂಘ, ಬೆಂಗಳೂರು ವಕೀಲರ ಸಹಕಾರ ಸಂಘ ನಿಯಮಿತ, ಬೆಂಗಳೂರು ವಕೀಲರ ಸಾಹಿತ್ಯ ಕೂಟ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಎಂ.ಜಿ ಉಮಾ ಅವರು ಭಾಗವಹಿಸಿದರು. ಈ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶ್ರೀ ಶಶಿಕಿರಣ್ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಬೆಂಗಳೂರು ವಕೀಲರ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಂಜಪ್ಪ ಕಾಳೇಗೌಡ, ಬೆಂಗಳೂರು ವಕೀಲರ ಸಾಹಿತ್ಯಕೂಟದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ, ನ್ಯಾಯಮಿತ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಹಾಗೂ ಎಲ್ಲ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಕೀಲ ಮಿತ್ರರು ಉಪಸ್ಥಿತರಿದ್ದರು.
ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ